ಸುಳ್ಯ ತಾಲೂಕಿನ ಸುಳ್ಯ ನಗರ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ

ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನ ಸುಳ್ಯ ಪಟ್ಟಣ ಪಂಚಾಯಿತಿಗೆ ಇಂದು ಭೇಟಿ ನೀಡಿ ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮತ್ತು ಮುಖ್ಯ ಅಧಿಕಾರಿ , ಇಂಜಿನಿಯರ್, ಅರೋಗ್ಯ ನಿರೀಕ್ಷಕರು, ಇತರ ಅಧಿಕಾರಿ ವರ್ಗ, ಸಿಬ್ಬಂದಿಗಳೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಅಮೃತ್ 2.0 ಮತ್ತು ರಾಜ್ಯ ಸರಕಾರದ ಯೋಜನೆಯಾದ ಮುಖ್ಯಮಂತ್ರಿಗಳ ನಗರೋತ್ತಾನ ಯೋಜನೆ ಮತ್ತು ಡಾ. ಬಿ ಆರ್ ಅಂಬೇಡ್ಕರ್ ನಿವಾಸ್ ಯೋಜನೆ, ರಾಜ್ಯ ಹಣಕಾಸು ಅನುದಾನದ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಲಾಯಿತು. ಪಟ್ಟಣ ಪಂಚಾಯತ್ ಅಭಿವೃದ್ಧಿಯಲ್ಲಿ ಇರುವ ಅಡಚಣೆ ಮತ್ತು ಪಟ್ಟಣ ಪಂಚಾಯತ್ ಕೈಗೊಂಡಿರುವ ಉತ್ತಮ ಆಡಳಿತದ ಬಗ್ಗೆ ಮಾಹಿತಿ ಪಡೆದು ಕೊಳ್ಳಲಾಯಿತು.

ಸುಳ್ಯ ಪಟ್ಟಣ ಪಂಚಾಯತಿಯು ಕೇಂದ್ರ ಸರ್ಕಾರದ 15 ನೇ ಹಣಕಾಸು ಅನುದಾನ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅನುಷ್ಠಾನದಲ್ಲಿ ಸಾಧಿಸಿರುವ ಉತ್ತಮ ಪ್ರಗತಿ ಬಗ್ಗೆ ತಿಳಿದು ಪ್ರಶಂಶಿಸಲಾಯಿತು.

ಪಟ್ಟಣ ಪಂಚಾಯತಿಯ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ತಮ್ಮ ಸೇವಾ ಅವಧಿಯಲ್ಲಿನ ಅನುಭವವನ್ನು ಹಂಚಿಕೊಂಡರು. ಪಟ್ಟಣ ಪಂಚಾಯಿತಿಯ ದಿನನಿತ್ಯದ ಆಡಳಿತದಲ್ಲಿ ಇರುವ ತಾಂತ್ರಿಕ ಸಮಸ್ಯೆಯನ್ನು ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮವಹಿಸುವಂತೆ ಕೋರಿಕೊಂಡರು.

ಪಟ್ಟಣ ಪಂಚಾಯತಿಯು ಎಲ್ಲಾ ಮನೆಗಳಿಂದ ಒಣಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ಹೆಚ್ಚಿನ ಗಮನ ನೀಡಿ SBM ಯೋಜನೆಯನ್ನು ಯಶಸ್ವಿಗೊಳಿಸಲು ಪ್ರಯತ್ನಿಸುವಂತೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಮಾಧ್ಯಮ ಪ್ರತಿನಿಧಿಯವರು ,ಪಟ್ಟಣ ಪಂಚಾಯತ್ ಅಧಿಕಾರಿ ವರ್ಗ ಸಿಬ್ಬಂದಿಗಳು ಹಾಜರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?