ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ

ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಬರಮೇಲು ಎಂಬಲ್ಲಿ ಅಕ್ರಮ ಕೋಳಿ ಅಂಕ ಹಾಗೂ ಜುಗಾರಿ
ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಬೆಳ್ತಂಗಡಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ತಿಲಕ್ ಹಾಗೂ ತಂಡ ಅ.17 ರಂದು ದಾಳಿ ನಡೆಸಿದ್ದು ಈ ವೇಳೆ ಅಲ್ಲಿದ್ದವರು ಓಡಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದರು.

ಆದರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಶೇಖರ ಹೆಗ್ಡೆ, ಪುನೀತ್, ಜಗದೀಶ್
ಎಂಬವರಾಗಿದ್ದಾರೆ. ಓಡಿ ತಪ್ಪಿಸಿಕೊಂಡ ಆರೋಪಿಗಳಾದ ಉದಯ್, ಜನಾರ್ಧನ ಗೌಡ ಮಲ್ಲೊಟ್ಟು ಎಂಬವರಾಗಿದ್ದಾರೆ.

ಸ್ಥಳದಿಂದ ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದು 500ರೂ ನಗದನ್ನು ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಅ.17 ರಂದು ಕಲಂ 87 KP Act ಜೊತೆಗೆ ಕಲಂ 11(1)(a), 11(1)(n) PREVEBTION OF CRUELTY TO ANIMAL ACT 1960 ಯಂತೆ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?