
ಪುತ್ತೂರು : ದೀಪಾವಳಿ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ (ಅಕ್ಟೋಬರ್ 20) ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ HAL ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ. ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ವಸ್ತ್ರ ವಿತರಣೆ ನಡೆಯಲಿದೆ.
ಕಾರ್ಯಕ್ರಮವು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದ್ದು, ಸಿಎಂ ಉದ್ಘಾಟನೆ ನೆರವೇರಿಸಲಿದ್ದಾರೆ.
ನಂತರದ ಕೆಲವು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ, ಅವರು ಸಂಜೆ 4 ಗಂಟೆಗೆ ಪುತ್ತೂರಿನಿಂದ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ವಾಪಸಾಗಲಿದ್ದಾರೆ.
ದೀಪಾವಳಿ ಸನ್ನಿವೇಶದಲ್ಲಿ ನಡೆಯುತ್ತಿರುವ ಈ ಭೇಟಿ ಪ್ರದೇಶದ ಜನರಲ್ಲಿ ವಿಶೇಷ ಉತ್ಸಾಹವನ್ನು ಹುಟ್ಟಿಸಿದೆ.


