ಅ.27ರಿಂದ ಮಂಗಳೂರು–ತಿರುವನಂತಪುರಂ ನೇರ ವಿಮಾನ: ಕರಾವಳಿಯ ಸಾರಿಗೆಗೆ ಹೊಸ ಅಧ್ಯಾಯ!

ಮಂಗಳೂರು: ಕರ್ನಾಟಕ ಮತ್ತು ಕೇರಳದ ಪ್ರಮುಖ ಕರಾವಳಿ ನಗರಗಳಾದ ಮಂಗಳೂರು ಮತ್ತು ತಿರುವನಂತಪುರಂ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಕ್ಟೋಬರ್ 27ರಿಂದ ಹೊಸ ವಿಮಾನಯಾನ ಸೇವೆಯನ್ನು ಆರಂಭಿಸಲಿದೆ. ಈ ಮೂಲಕ ಎರಡೂ ನಗರಗಳ ನಡುವಿನ ಪ್ರಯಾಣದ ಅವಧಿ ರೈಲಿನಲ್ಲಿ ಸುಮಾರು 9 ಗಂಟೆಗಳಿಂದ ವಿಮಾನದಲ್ಲಿ ಕೇವಲ 1 ಗಂಟೆ 20 ನಿಮಿಷಕ್ಕೆ ಇಳಿಕೆಯಾಗಲಿದೆ.

ಈ ಹೊಸ ಸೇವೆಯು ವಾರದಲ್ಲಿ ಮೂರು ದಿನಗಳ ಕಾಲ ಕಾರ್ಯನಿರ್ವಹಿಸಲಿದೆ. ಮಂಗಳೂರಿನಿಂದ ತಿರುವನಂತಪುರಂಕ್ಕೆ ವಿಮಾನ ಸಂಖ್ಯೆ IX 5531 ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 8:45ಕ್ಕೆ ಹೊರಟು 10:05ಕ್ಕೆ ತಲುಪಲಿದೆ. ಅದೇ ರೀತಿ, ತಿರುವನಂತಪುರಂದಿಂದ ಮಂಗಳೂರಿಗೆ ವಿಮಾನ ಸಂಖ್ಯೆ IX 5532 ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಮುಂಜಾನೆ 4:25ಕ್ಕೆ ಹೊರಟು 5:45ಕ್ಕೆ ಮಂಗಳೂರನ್ನು ತಲುಪಲಿದೆ.

ಪ್ರಸ್ತುತ, ಈ ಎರಡು ನಗರಗಳ ನಡುವೆ ವೇಗದ ಸಾರಿಗೆ ಸಂಪರ್ಕಕ್ಕಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಲಭ್ಯವಿದ್ದು, 620 ಕಿ.ಮೀ. ದೂರವನ್ನು ಕ್ರಮಿಸಲು ಸುಮಾರು 8 ಗಂಟೆ 40 ನಿಮಿಷಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ, ಹೊಸ ವಿಮಾನ ಸೇವೆಯಿಂದಾಗಿ ಪ್ರಯಾಣಿಕರು 7 ಗಂಟೆಗೂ ಅಧಿಕ ಸಮಯವನ್ನು ಉಳಿಸಬಹುದಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಹೊಸ ಮಾರ್ಗದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದು, ”ಪ್ರಕೃತಿ, ಸಂಸ್ಕೃತಿ ಮತ್ತು ಪ್ರಶಾಂತತೆ ಮೇಳ್ಳೆಸುವ ಒಂದು ಕರಾವಳಿಯಿಂದ ಮತ್ತೊಂದು ಕರಾವಳಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ,” ಎಂದು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ.

ಈಗಾಗಲೇ ಮಂಗಳೂರಿನಿಂದ ಮುಂಬೈ, ಹೊಸದಿಲ್ಲಿ, ಬೆಂಗಳೂರು, ಹೈದರಾಬಾದ್, ಚೆನ್ನೈ, ದುಬೈ, ಅಬುದಾಬಿ, ದಮ್ಮಾಮ್, ಬಹರೈನ್, ದೋಹಾ, ಜಿದ್ದಾ ಮತ್ತು ಕುವೈತ್‌ಗೆ ನೇರ ವಿಮಾನ ಸಂಪರ್ಕವಿದ್ದು, ಈ ಪಟ್ಟಿಗೆ ಈಗ ತಿರುವನಂತಪುರಂ ಕೂಡ ಸೇರ್ಪಡೆಯಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!