ಸುಬ್ರಹ್ಮಣ್ಯ – ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರಣ ; ಡಿಸೆಂಬರ್ ವರೆಗೆ ಮಂಗಳೂರು-ಬೆಂಗಳೂರು ಮಧ್ಯೆ ರೈಲು ಸಂಚಾರ ವ್ಯತ್ಯಯ

ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.

ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.

ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.

ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌’ಪ್ರೆಸ್ ರೈಲು ಮೊದಲು 02.11.2025, 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್‌-ವೀಕ್ಲಿ ಎಕ್ಸ್‌ಪ್ರೆಸ್ 30.10.2025 8 8 . ಮತ್ತು 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.

ರೈಲು ಸಂಖ್ಯೆ 16516 ಕಾರವಾರ ವೀಕ್ಲಿ ಯಶವಂತಪುರ ಟ್ರೈ-ಎಕ್ಸ್‌’ಪ್ರೆಸ್ ಮೊದಲು 01.11.2025 ರವರೆಗೆ . 04.11.2025 80 16.12.2025 ರವರೆಗೆ ರದ್ದುಗೊಳ್ಳಲಿದೆ.

ಬೆಳಗಿನ ರೈಲು ರದ್ದು ವಿಸ್ತರಣೆ:

ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬ‌ರ್ 16ರ ವರೆಗೆ ರದ್ದು ಮಾಡಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?