ಕಲ್ಲಡ್ಕ ಭಟ್ ವಿರುದ್ಧ ಬಲವಂತದ ಕ್ರಮ ಬೇಡ – ನ್ಯಾಯಾಲಯ.

ಪುತ್ತೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್‌ಎಸ್‌ಎಸ್ ಮುಂದಾಳು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ ನೀಡಿದೆ. ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.


ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿತ್ತು. ಅ.೨೦ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ಬಾವನೆಗಳ ಪ್ರಚೋಜನೆ, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಃಓS ೭೯, ೧೯೬, ೨೯೯, ೩೦೨ ಹಾಗೂ ೩(೫) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಂತರ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.
ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್ಗೆ ವಿಚಾರಣೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು. ಇದೀಗ ಕೋರ್ಟ್ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ. ಮುಂದಿನ ವಿಚಾರಣೆ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ಅಕ್ಟೋಬರ್ ೨೯ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಅ.೨೯ರ ವರೆಗೆ ಕಲ್ಲಡ್ಕ ಪ್ರಭಾಕರ ಭಟ್ ನಿರಾಳರಾಗಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?