ಆರ್.ಎಸ್.ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ

ಆರ್.ಎಸ್.ಎಸ್ ಪಥಸಂಚಲನಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಆರ್.ಎಸ್.ಎಸ್ ಸಂಘಟನೆಗೆ ನೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಘವು ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆರ್.ಎಸ್.ಎಸ್ ಆಗಲಿ ಯಾವುದೇ ಸಂಘ-ಸಂಸ್ಥೆಗಳಾಗಲಿ ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ, ಉದ್ಯಾನವನ, ಮೈದಾನಗಳಲ್ಲಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಈ ಮೂಲಕ ಆರ್.ಎಸ್.ಎಸ್ ನಿರ್ಬಂಧಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂಬ ಆಕ್ಷೇಪ ವ್ಯಕ್ತವಾಗಿತ್ತು.

ಸರ್ಕಾರದ ಆದೇಶದ ಬೆನ್ನಲ್ಲೇ ಕಲಬುರಗಿ ಚಿತ್ತಾಪುರ ಸೇರಿದಂತೆ ವಿವಿಧೆಡೆ ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಆರ್.ಎಸ್.ಎಸ್ ಸದಸ್ಯರೊಬ್ಬರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?