ಕುಕ್ಕೆ ಸುಬ್ರಹ್ಮಣ್ಯ: ಮದುವೆ ಪ್ರಯಾಣ ದುರಂತ – ಬಿಸಿಲೆ ಘಾಟ್‌ನಲ್ಲಿ ಟಿಟಿ ಪಲ್ಟಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡರು

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಇಂದು ನಡೆಯಬೇಕಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಟಿಟಿ ವಾಹನ ಬಿಸಿಲೆ ಘಾಟ್ ಸಮೀಪ ಪಲ್ಟಿಯಾಗಿ ಬಿದ್ದ ಪರಿಣಾಮ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಕೂಡುರಸ್ತೆ ವನಗೂರು ಮೂಲದ ವರ ಹಾಗೂ ಏನೆಕಲ್ಲಿನ ವಧುವಿನ ಮದುವೆ ಇಂದು ಆದಿ ಸುಬ್ರಹ್ಮಣ್ಯದಲ್ಲಿ ನಡೆಯಬೇಕಿತ್ತು. ವಧು-ವರರು ನಿನ್ನೆಯೇ ಮದುವೆ ಹಾಲ್‌ಗೆ ಆಗಮಿಸಿದ್ದರು. ಇಂದು ಬೆಳಿಗ್ಗೆ ವರಪಕ್ಷದವರು ಟಿಟಿ ವಾಹನದಲ್ಲಿ ಮದುವೆ ಸ್ಥಳದತ್ತ ತೆರಳುತ್ತಿದ್ದ ವೇಳೆ, ಬಿಸಿಲೆ ಘಾಟ್‌ನ ತಿರುವಿನಲ್ಲಿ ವಾಹನ ನಿಯಂತ್ರಣ ತಪ್ಪಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ.

ಅಪಘಾತದಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಪ್ರಾಥಮಿಕವಾಗಿ ಕುಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, 11 ಮಂದಿಯನ್ನು ಪುತ್ತೂರಿನ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಗಂಭೀರವಾಗಿ ಗಾಯಗೊಂಡ 7 ಮಂದಿಯನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನೆಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!