ಪುತ್ತೂರು: ಬಿಸಿಲೆ ಘಾಟ್‌ನಲ್ಲಿ ಪಲ್ಟಿಯಾದ ಮದುವೆ ದಿಬ್ಬಣದ ಬಸ್ – ಓರ್ವ ಸಾವು

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ನಡೆಯಬೇಕಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ದಿಬ್ಬಣದ ಟಿಟಿ ವಾಹನ ಬಿಸಿಲೆ ಘಾಟ್‌ನ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಪರಿಣಾಮ ಒಬ್ಬರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಘಟನೆ ಗುರುವಾರ ಬೆಳಿಗ್ಗೆ ಬಿಸಿಲೆ ಘಾಟ್‌ನ 22ನೇ ತಿರುವಿನಲ್ಲಿ ನಡೆದಿದೆ. ಸಕಲೇಶಪುರದ ಒಣಗೂರು ನಿವಾಸಿ ಶಿವರಾಜ್ (58) ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.ಮದುವೆಗೂ ನಿನ್ನೆಯೇ ವಧು-ವರರು ಆದಿ ಸುಬ್ರಹ್ಮಣ್ಯ ಮಂಟಪಕ್ಕೆ ಆಗಮಿಸಿದ್ದರು. ಇಂದು ಬೆಳಿಗ್ಗೆ ವರಪಕ್ಷದವರು ಟಿಟಿ ವಾಹನದಲ್ಲಿ ಮದುವೆ ಸ್ಥಳದತ್ತ ತೆರಳುತ್ತಿದ್ದಾಗ, ವಾಹನ ನಿಯಂತ್ರಣ ತಪ್ಪಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ.ಅಪಘಾತದಲ್ಲಿ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ ಬಳಿಕ, 11 ಮಂದಿಯನ್ನು ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಾರದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!