ಉಡುಪಿ: ಎಎಸ್‌ಐ ವಿಶ್ವನಾಥ್ ಹೃದಯಾಘಾತದಿಂದ ನಿಧನ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹಾಗೂ ಪ್ರಸ್ತುತ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಹಾಯಕ ಉಪನಿರೀಕ್ಷಕ (ಎಎಸ್‌ಐ) ವಿಶ್ವನಾಥ್ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ.ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿಗಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ವೇಳೆ ಹಾಡುತ್ತಿದ್ದಾಗ ವಿಶ್ವನಾಥ್ ಕುಸಿದಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಅವರು ಗಂಭೀರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.ಅವರ ಕುಟುಂಬದವರಿಗೆ ಬಂಧು ಮಿತ್ರರಿಗೆ ದುಃಖ ಭರಿಸುವ ಶಕ್ತಿ ದೊರೆಯಲೆಂದು ಪ್ರಾರ್ಥಿಸುತ್ತೇವೆ.

Star Of Kudla

Learn More →

Leave a Reply

Your email address will not be published. Required fields are marked *