ಹುಬ್ಬಳ್ಳಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ₹1.07 ಕೋಟಿ ವಂಚನೆ

ಹುಬ್ಬಳ್ಳಿ: ಕೇಶ್ವಾಪುರದ ನಾಗೇಶ ಶರ್ಮಾ ಅವರಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮಾಡಿದ ವಂಚಕರು, ಮುಂಬೈ ಪೊಲೀಸರ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ, ₹1.07 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.ವಿಶ್ವಾಸ ಹಾಗೂ ಮತ್ತೊಬ್ಬ ವ್ಯಕ್ತಿ ನಾಗೇಶ ಅವರಿಗೆ ವಾಟ್ಸ್‌ಆ್ಯಪ್ ವಿಡಿಯೊ ಕರೆ ಮಾಡಿ, ‘ಮುಂಬೈನಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ₹2 ಕೋಟಿ ವ್ಯವಹಾರ ನಡೆಸಲು ಒ.ಎಂ. ಅಬ್ದುಲ್ ಸಲಾಮ್ ಅವರಿಂದ ₹20 ಲಕ್ಷ ಪಡೆದುಕೊಂಡಿರುವ ಕುರಿತು ಲೊಕಬಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಜಿಟಲ್ ಅರೆಸ್ಟ್ ಮೂಲಕ ತನಿಖೆ ನಡೆಸಲಾಗುತ್ತಿದ್ದು, ಹಣ ಪಾವತಿಸಬೇಕಾಗುತ್ತದೆ’ ಎಂದು ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬ‌ರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.₹19.49 ಲಕ್ಷ ವಂಚನೆ: ಹುಬ್ಬಳ್ಳಿ ತಾಲ್ಲೂಕಿನ ಗಾಮಗಟ್ಟಿಯದೇಸಾಯಿ ನಗರದ ಅಕ್ಷತಾ ಅವರಾದಿ ಅವರು ಇನ್‌ಸ್ಟಾಗ್ರಾಂ ಖಾತೆಯಲ್ಲಿನ ವರ್ಕ್ ಪ್ರಂ ಹೋಮ್ ಜಾಹೀರಾತು ನೋಡಿ, ವಂಚಕರ ಜಾಲಕ್ಕೆ ಸಿಲುಕಿ ₹19.49 ಲಕ್ಷ ಆನ್‌ಲೈನ್‌ನಲ್ಲಿ ಕಳೆದುಕೊಂಡಿದ್ದಾರೆ.ಜಾಹೀರಾತು ವೀಕ್ಷಿಸಿದ ತಕ್ಷಣ ಅಕ್ಷತಾ ಅವರ ವಾಟ್ಸ್ಆ್ಯಪ್ ನಂಬರ್‌ಗೆ ಕೋಡ್ ನಂಬರ್ ಕಳುಹಿಸಿದ ವಂಚಕರು, ಸೂಪರ್ ಗ್ರೂಪ್ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್‌ಗೆ ಅವರ ನಂಬರ್ ಸೇರಿಸಿದ್ದಾರೆ. ನಂತರ ಅವರಿಗೆ ವಿವಿಧ ಟಾಸ್ಕ್ ನೀಡಿ, ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿದ್ದಾರೆ. ವಿವಿಧ ಬ್ಯಾಂಕ್ ಖಾತೆಗಳಿಂದ ಆರ್‌ಟಿಜಿಎಸ್‌, ಫೋನ್ ಪೇ ಮೂಲಕ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!