
ಪುತ್ತೂರು, ನ. 2: ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಪುತ್ತೂರು ನಗರ ಹಾಗೂ ಗ್ರಾಮಾಂತರ ಪ್ರಖಂಡಗಳ ಸಂಯುಕ್ತ ಆಶ್ರಯದಲ್ಲಿ ಬಲಿದಾನ ದಿವಸವನ್ನು ಆಚರಿಸುವ ಭಾಗವಾಗಿ ರಕ್ತದಾನ ಶಿಬಿರವನ್ನು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನಲ್ಲಿ ಆಯೋಜಿಸಲಾಯಿತು.



1990ರ ನವೆಂಬರ್ 2ರಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಸಾಹಸಿ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿತ್ತು.
ಈ ಶಿಬಿರದಲ್ಲಿ ಹಿಂದೂ ಮುಖಂಡರಾದ ಮುರಳೀಕೃಷ್ಣ ಹಸಂತಡ್ಕ ಹಾಗೂ ಖ್ಯಾತ ವೈದ್ಯರಾದ ಡಾ. ಸುರೇಶ್ ಪುತ್ತೂರಾಯ ಸೇರಿದಂತೆ ಒಟ್ಟು 33 ಜನ ಕಾರ್ಯಕರ್ತರು ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ವಿಶ್ವ ಹಿಂದೂ ಪರಿಷದ್ ಗ್ರಾಮಾಂತರ ಪ್ರಖಂಡ ಅಧ್ಯಕ್ಷ ಜಯಂತ್ ಶೆಟ್ಟಿ ಕಂಬಳತ್ತಡ್ಡ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಜರಂಗದಳ ಜಿಲ್ಲಾ ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡು, ಹಾಗೂ ಗ್ರಾಮಾಂತರ ಪ್ರಖಂಡ ಸಂಯೋಜಕ ಕಿರಣ್ ರಾಮಕುಂಜ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.


