ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಿರುಕುಳ – ನಟಿಗೆ ಅಶ್ಲೀಲ ಫೋಟೋ ಕಳುಹಿಸಿದ ವ್ಯಕ್ತಿ ಬಂಧನ

ಬೆಂಗಳೂರು: ಸೋಶಿಯಲ್ ಮೀಡಿಯಾ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ, ಅದರ ದುರ್ಬಳಕೆ ಪ್ರಕರಣಗಳೂ ಹೆಚ್ಚುತ್ತಿವೆ. ಇತ್ತೀಚಿಗೆ ನಟಿ ರಮ್ಯಾ ಅವರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೊಂದು ಕಿರುತೆರೆ ನಟಿಗೆ ಅಶ್ಲೀಲ ಫೋಟೋ ಕಳುಹಿಸಿದ ಮತ್ತೊಬ್ಬನೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕನ್ನಡ ಮತ್ತು ತೆಲುಗು ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದ ನಟಿಗೆ, ಫೇಸ್‌ಬುಕ್‌ ಮೂಲಕ ವ್ಯಕ್ತಿಯೋರ್ವ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. “ನವೀನ್‌ಝ್” ಎಂಬ ಫೇಸ್‌ಬುಕ್ ಖಾತೆಯಿಂದ ಕಳೆದ ಮೂರು ತಿಂಗಳಿನಿಂದ ನಟಿಗೆ ಅಶ್ಲೀಲ ಮೆಸೇಜ್‌ಗಳು ಮತ್ತು ಫೋಟೋ, ವಿಡಿಯೋಗಳನ್ನು ಕಳುಹಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಮೊದಲು ಫೇಸ್‌ಬುಕ್‌ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ ಆರೋಪಿಯ ವಿನಂತಿ ನಟಿಯಿಂದ ನಿರಾಕೃತವಾಗುತ್ತಿದ್ದಂತೆಯೇ, ಆತ ಮೆಸೆಂಜರ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಆರಂಭಿಸಿದ್ದಾನೆ. ನಟಿ ಹಲವು ಬಾರಿ ಎಚ್ಚರಿಕೆ ನೀಡಿದರೂ ಆತ ಬಗ್ಗದೆ ಬೇರೆ ಬೇರೆ ಖಾತೆಗಳ ಮೂಲಕ ಕಿರುಕುಳ ನೀಡುತ್ತಿದ್ದನು.

ನಿರಂತರ ಕಿರುಕುಳದಿಂದ ಬೇಸತ್ತ ನಟಿ, ನವೆಂಬರ್ 1ರಂದು ನಾಗರಭಾವಿ ಬಳಿ ಆರೋಪಿಯನ್ನು ಭೇಟಿಯಾಗಿ ಎಚ್ಚರಿಕೆ ನೀಡಿದ್ದರು. ಆದರೂ ಆತ ಅಸಭ್ಯ ವರ್ತನೆ ಮುಂದುವರಿಸಿದ ಹಿನ್ನೆಲೆಯಲ್ಲಿ, ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ದೂರು ಆಧಾರಿಸಿ ಪೊಲೀಸರು ನವೀನ್ ಎಂಬಾತನನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆತ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾ ದುರ್ಬಳಕೆಯ ಇಂತಹ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ಅಶ್ಲೀಲ ಅಥವಾ ಕಿರುಕುಳದ ಮೆಸೇಜ್‌ಗಳನ್ನು ತಕ್ಷಣ ಪೊಲೀಸರಿಗೆ ತಿಳಿಸಲು ಸಲಹೆ ನೀಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!