ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್‌.ವೈ. ಮೇಟಿ ನಿಧನ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಹೆಚ್‌.ವೈ. ಮೇಟಿ (79) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೇಟಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದೇ ಕೊನೆಯುಸಿರೆಳೆದರು.ಬಾಗಲಕೋಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಹೆಚ್‌.ವೈ. ಮೇಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ಹಲವು ವರ್ಷಗಳಿಂದ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಪಕ್ಷದ ನಾಯಕರು ಮತ್ತು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *