ಬಿಲಾಸ್‌ಪುರದಲ್ಲಿ ರೈಲು ದುರಂತ: ಇಬ್ಬರು ಸಾವು, ಹಲವರಿಗೆ ಗಾಯ

ಛತ್ತೀಸ್‌ಗಢ್ ನ. 4: ಬಿಲಾಸ್‌ಪುರ ಜಿಲ್ಲೆಯ ಜೈರಾಮ್‌ನಗರ ರೈಲು ನಿಲ್ದಾಣದ ಬಳಿ ಮಂಗಳವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ಥಳೀಯ ಪ್ರಯಾಣಿಕ ರೈಲು (ಕೊರ್ಬಾ ಪ್ಯಾಸೆಂಜರ್) ಒಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಪ್ರಯಾಣಿಕ ರೈಲಿನ ಮೊದಲ ಬೋಗಿ ಸರಕು ರೈಲಿನ ಮೇಲೇರಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ಬಳಿಕ ಸ್ಥಳದಲ್ಲಿ ಆತಂಕ ಮತ್ತು ಗೊಂದಲದ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳೀಯರು ಘಟನಾ ಸ್ಥಳದತ್ತ ಧಾವಿಸಿದ್ದಾರೆ. ಅಧಿಕಾರಿಗಳು ತಕ್ಷಣ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯ ಆಡಳಿತ ಮತ್ತು ರೈಲ್ವೆ ಅಧಿಕಾರಿಗಳು ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಶೀಘ್ರದಲ್ಲೇ ಬಹಿರಂಗವಾಗುವ ನಿರೀಕ್ಷೆಯಿದೆ.

Star Of Kudla

Learn More →

Leave a Reply

Your email address will not be published. Required fields are marked *