ಮಂಗಳೂರು : ಸಿಸಿಬಿ ಪೊಲೀಸರ ದಾಳಿ — ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರು ಬಂಧನ

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 24.57 ಗ್ರಾಂ ಎಂಡಿಎಂಎ (MDMA) ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಅಡ್ಯಾರ್ ನಿವಾಸಿ, ಆಟೋ ಚಾಲಕ ಅಬ್ದುಲ್ ಸಲಾಮ್ (39) ಹಾಗೂ ಉಳ್ಳಾಲ ನಿವಾಸಿ ಮೊಹಮ್ಮದ್ ನಾಸೀರ್ ಎಂದು ಗುರುತಿಸಲಾಗಿದೆ.

ಮೊದಲ ಪ್ರಕರಣದಲ್ಲಿ, ಅಬ್ದುಲ್ ಸಲಾಮ್ ಮಂಗಳೂರು ಬಂದರು ಪ್ರದೇಶದಲ್ಲಿ ಆಟೋ ರಿಕ್ಷಾದಲ್ಲೇ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದನೆಂದು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದರು. ಆತನಿಂದ ರೂ. 1,20,000 ಮೌಲ್ಯದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಫೋನ್, ತೂಕಮಾಪನ ಯಂತ್ರ ಹಾಗೂ ಖಾಲಿ ಜಿಪ್ ಲಾಕ್ ಕವರ‌ಗಳು ಸೇರಿದಂತೆ ರೂ. 2,30,500 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ, ಉಳ್ಳಾಲ ನಿವಾಸಿ ಮೊಹಮ್ಮದ್ ನಾಸೀರ್ ಬೋಳಿಯಾರು ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದನೆಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲ್ಪಟ್ಟಿದ್ದಾನೆ. ಆತನಿಂದಲೂ ರೂ. 1,20,000 ಮೌಲ್ಯದ ಎಂಡಿಎಂಎ, ಕಪ್ಪು ಬಣ್ಣದ ಯಮಹಾ FZ ಬೈಕ್, ಮೊಬೈಲ್ ಫೋನ್ ಹಾಗೂ ಖಾಲಿ ಜಿಪ್ ಲಾಕ್ ಕವರಗಳು ಸೇರಿದಂತೆ ಒಟ್ಟು ರೂ. 2,05,000 ಮೌಲ್ಯದ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಎರಡೂ ಪ್ರಕರಣಗಳ ಪತ್ತೆ ಮತ್ತು ದಾಳಿ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?