ದಾವಣಗೆರೆ: ರೈಲ್ವೆ ಉದ್ಯೋಗ ಕೊಡಿಸುವ ಹೆಸರಿನಲ್ಲಿ ₹25.93 ಲಕ್ಷ ವಂಚನೆ — ಮಹಿಳೆಯಿಂದ ದೂರು

ದಾವಣಗೆರೆ ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರನ್ನೇ ₹25.93 ಲಕ್ಷಕ್ಕೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಮ್ಯಾಟ್ರಿಮೋನಿ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೋರ್ವ, ಮಹಿಳೆಯ ಸಹೋದರನಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಂಚಕನ ಮಾತು ನಂಬಿದ ಮಹಿಳೆ, ಸೆಪ್ಟೆಂಬರ್ 14ರಿಂದ ಅಕ್ಟೋಬರ್ 30ರವರೆಗೆ ನೂರಕ್ಕೂ ಹೆಚ್ಚು ಬಾರಿ ಹಣ ವರ್ಗಾವಣೆ ಮಾಡಿದ್ದು, ಒಟ್ಟು ₹25.93 ಲಕ್ಷ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಧು ಎಂಬಾತನೇ ಈ ವಂಚನೆ ನಡೆಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?