ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವು – ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಪುತ್ತೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಜಯ ಸಾಧಿಸಿದ ಹಿನ್ನೆಲೆ, ಪುತ್ತೂರಿನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಸಂಭ್ರಮಾಚರಣೆ ನಡೆಸಿದರು. ವಿಜಯದ ಘೋಷಣೆ ಕೂಗಿ, ಪರಸ್ಪರ ಸಿಹಿ ಹಂಚಿಕೊಂಡು ಕಾರ್ಯಕರ್ತರು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು.

ಈ ಬಾರಿ ಸಂಭ್ರಮಾಚರಣೆಗೆ ವಿಶೇಷತೆ ಎಂಬಂತೆ, ಪಟಾಕಿ ಸಿಡಿಸದೆ ಸಂಭ್ರಮಿಸಲು ಕಾರ್ಯಕರ್ತರು ತೀರ್ಮಾನಿಸಿದರು. ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನ ಹಾಗೂ ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ದುರ್ಘಟನೆ ಹಿನ್ನೆಲೆಯಲ್ಲಿ, ಪರಿಸರ ಸ್ನೇಹಿ ಹಾಗೂ ಸಂವೇದನಾಶೀಲ ರೀತಿಯಲ್ಲಿ ವಿಜಯೋತ್ಸವ ಆಚರಿಸುವುದು ಸೂಕ್ತವೆಂದು ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಪಟ್ಟರು.

ಸಂಭ್ರಮಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ಥ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲದ ದಯಾನಂದ ಶೆಟ್ಟಿ ಉಜಿರೆಮಾರ್, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ವಿದ್ಯಾಧರ್ ಜೈನ್, ಹಾಗೂ ಶಶಿಧರ್ ನಾಯಕ್, ಸಂತೋಷ್ ರೈ ಕೈಕಾರ, ಹರಿಪ್ರಸಾದ್ ಯಾದವ್, ಹರೀಶ್ ಬಿಜಾರ್ತೆ, ನಿತೇಶ್ ಶಾಂತಿವನ, ದೀಕ್ಷಾ ಪೈ, ವಸಂತಲಕ್ಷ್ಮಿ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದರು.

ಹಿರಿಯ ಮುಖಂಡರಾದ ಅಪ್ಪಯ್ಯ ಮಣಿಯಣಿ, ಚನಿಲ ತಿಮ್ಮಪ್ಪ ಶೆಟ್ಟಿ, ಲೋಕೇಶ್ ಹೆಗ್ಡೆ, ಚಂದ್ರಶೇಖರ ರಾವ್ ಬಪ್ಪಳಿಗೆ, ರಾಜೇಶ್ ಬನ್ನೂರ್, ರಾಧಾಕೃಷ್ಣ ಬೋರ್ಕರ್, ಬುಡಿಯಾರ್ ರಾಧಾಕೃಷ್ಣ ರೈ, ಸತೀಶ್ ನಾಯ್ಕ್, ಯುವ ಮುಖಂಡ ಶಿಶಿರ್ ಮೊದಲಾದವರು ಕೂಡ ಕಾರ್ಯಕ್ರಮದಲ್ಲಿದ್ದರು.

Star Of Kudla

Learn More →

Leave a Reply

Your email address will not be published. Required fields are marked *