ನಡುರಸ್ತೆಯಲ್ಲಿ ಮಾಲೀಕನಿಗೆ ಚಾಕುವಿನಿಂದ ಇರಿದು ಚಿನ್ನ ದೋಚಿ ಪರಾರಿ

ಬೆಂಗಳೂರು: ಕೆಲಸ ಕೊಟ್ಟ ಮಾಲೀಕ ದೇವರಂತೆ ಎನ್ನುವ ಮಾತಿದೆ. ಆದರೆ ಇಲ್ಲಿ ಚಿನ್ನದಾಸೆಗೆ ಮಾಲೀಕನಿಗೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲಿ ಚಿನ್ನದ ಚೈನ್​ ದೋಚಿಕೊಂಡು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್​ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ.

ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು ನಂಬಿಸಿ ಕರೆದುಕೊಂಡು ಹೋಗಿದ್ದ ಆರೋಪಿ ಈ ಕೃತ್ಯ ಎಸೆಗಿದ್ದಾನೆ.

ಗಣೇಶ ಮೂರ್ತಿ ತಯಾರಿಸುವ ಕಾರ್ಖಾನೆ ಮಾಲೀಕ ಅಮರ್ ನಾರಾಯಣಸ್ವಾಮಿ ಗಾಯಗೊಂಡವರು. ಜಯಂತ್ (23) ಹಲ್ಲೆ ನಡೆಸಿ ಪರಾರಿಯಾದ ಆರೋಪಿ. ಅಮರ್ ಅವರಿಗೆ ಆರೋಪಿಯು ಚಾಕುವಿನಿಂದ ಕುತ್ತಿಗೆ, ಭುಜ, ಹಣೆಗೆ ಇರಿದು ಗಾಯಗೊಳಿಸಿ ಅವರ ಕೊರಳಿನಲ್ಲಿದ್ದ 100 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳು ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳು ಕಾರ್ಖಾನೆಯಲ್ಲೇ ಕೆಲಸ ಮಾಡಿದ್ದ ಆರೋಪಿ: ಅಮರ್‌ ಅವರ ಕಾರ್ಖಾನೆಯಲ್ಲಿ ಕೇವಲ ಮೂರು ದಿನ ಕೆಲಸ ಮಾಡಿ ಬಿಟ್ಟು ಹೋಗಿದ್ದ ಆರೋಪಿಯು ನ.13 ರಂದು ಮಧ್ಯಾಹ್ನ ಕಾರ್ಖಾನೆಗೆ ಆಗಮಿಸಿ, ಎರಡು ಬಿಡಿಎ ಸೈಟ್‌ಗಳು ಕಡಿಮೆ ಬೆಲೆಗೆ ಮಾರಾಟಕ್ಕಿವೆ, ಅದನ್ನು ನೋಡಿಕೊಂಡು ಬರೋಣ ಎಂದು ಅಮರ್‌ಗೆ ಹೇಳಿದ್ದ.

ತಪ್ಪಿಸಿಕೊಂಡವನ ಬೆನ್ನೆತ್ತಿ ಚಿನ್ನ ದೋಚಿದ ದುರುಳ: ಅದರಂತೆ ತಮ್ಮ ಕಾರಿನಲ್ಲಿ ಆರೋಪಿಯನ್ನು ಕರೆದುಕೊಂಡು ಅಮರ್ ಹೋಗಿದ್ದರು. ನಿವೇಶನ ನೋಡಿಕೊಂಡು ವಾಪಸ್ ಬರುವಾಗ ಕಾರಿನ ಹಿಂಭಾಗದ ಸೀಟ್‌ನಲ್ಲಿ ಕುಳಿತ್ತಿದ್ದ ಆರೋಪಿಯು ಅಮರ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದ. ಇದಕ್ಕೆ ಅಮರ್​ ಪ್ರತಿರೋಧ ತೋರಿದಾಗ ಚಾಕುವಿನಿಂದ ಬೆನ್ನು, ಕುತ್ತಿಗೆಗೆ ಇರಿದು ಗಾಯಗೊಳಿಸಿದ್ದಾನೆ. ಬಳಿಕ ಕಾರಿನಿಂದ ಇಳಿದ ಅಮರ್ ತಪ್ಪಿಸಿಕೊಂಡು ಓಡಿಹೋಗಿ ರಸ್ತೆಯಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನದ ಹಿಂಭಾಗ ಹತ್ತಿಕೊಂಡು ಹೋಗಲು ಯತ್ನಿಸಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಈ ಸಂಬಂಧ ದೂರು ನೀಡಿರುವ ಅಮರ್‌, ಆರೋಪಿಯು ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣವರ್ ತಿಳಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?