ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ನ.16ರಿಂದ ಚಂಪಾಷಷ್ಠಿ ಜಾತ್ರಾ ಮಹೋತ್ಸವ; ಸರ್ಪಸಂಸ್ಕಾರ ಸೇವೆ ತಾತ್ಕಾಲಿಕ ಇಲ್ಲ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.2ರ ತನಕ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ನ. 15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ ಪ್ರಸಾದ ವಿತರಣೆ, ನ. 16ರಂದು ಕೊಪ್ಪರಿಗೆ ಏರಿ ಜಾತ್ರಾ ಮಹೋತ್ಸವ ಆರಂಭವಾಗುವುದರಿಂದ ನ. 14ರಿಂದಲೇ ಸರ್ಪಸಂಸ್ಕಾರ ಸೇವೆ ಆರಂಭವಾಗುವುದಿಲ್ಲ. ಡಿ. 3 ಬುಧವಾರದಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.
ಲಕ್ಷದೀಪೋತ್ಸವ (ನ.19), ಚೌತಿ (ನ.24), ಪಂಚಮಿ (ನ.25) ದಿನದಂದು ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ನ. 26) ದಿನದಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಅಲ್ಲದೆ ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ.

ಜಾತ್ರೆ ಮತ್ತು ಪ್ರಮುಖ ದಿನಗಳನ್ನು ಬಿಟ್ಟು ಇತರ ದಿನಗಳಲ್ಲಿ ಆಶ್ಲೇಷಾ ಬಲಿ, ಪಂಚಾಮೃತ ಮಹಾಭಿಷೇಕ, ಶೇಷ ಸೇವೆ, ಕಾರ್ತಿಕಪೂಜೆ, ಮಹಾಪೂಜೆ, ತುಲಾಭಾರ, ನಾಗಪ್ರತಿಷ್ಠೆ, ಉತ್ಸವ, ರಥೋತ್ಸವ ಮೊದಲಾದ ಸೇವೆಗಳು ನೆರವೇರಲಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?