ಬೆಳ್ತಂಗಡಿ: ಆಟೊ ಪಲ್ಟಿಯಾಗಿ ಬಾಲಕ ಸಾವು, ಐವರು ಗಾಯ

ಬೆಳ್ತಂಗಡಿ: ಲೈಲಾ ಗ್ರಾಮದ ಕುಟ್ರೋಟ್ಟು–ಟಿಬಿ ಕ್ರಾಸ್ ರಸ್ತೆಯ ಹೊಕ್ಕಿಲದಲ್ಲಿ ಆಟೊರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 12 ವರ್ಷದ ಬಾಲಕನೊಬ್ಬ ಸ್ತಬ್ಧವಾಗಿರುವ ಘಟನೆ ನ. 16ರ ರಾತ್ರಿ ನಡೆದಿದೆ.

ಮೃತನನ್ನು ಬೆಳ್ತಂಗಡಿ ತಾಲ್ಲೂಕು ನಾವೂರು ಗ್ರಾಮದ ಕುಂದಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು ಗುರುತಿಸಲಾಗಿದೆ.

ನವೂರು ಗ್ರಾಮದ ಶಶಿ ಚಾಲನೆ ಮಾಡುತ್ತಿದ್ದ ಆಟೊರಿಕ್ಷಾದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತನ್ವಿತ್‌ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ ಐದು ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ತಂಡ ಲಕ್ಷ ದೀಪೋತ್ಸವಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ವೇಳೆ ದುರಂತ ಸಂಭವಿಸಿದೆ.

ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?