ಬೆಳ್ತಂಗಡಿ : ಕುತ್ರೋಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ, ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ.

ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ನಡೆದ ಘಟನೆಯಾಗಿದೆ.ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?