18 ಅಡಿ ಎತ್ತರದಿಂದ ಬಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಮೃತಪಟ್ಟರು

ಬೆಳ್ತಂಗಡಿ: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪೈಂಟಿಂಗ್ ಕೆಲಸ ಮಾಡುತ್ತಿದ್ದ ಪ್ರಮೋದ್ ಗೌಡ ಒಂದು ತಿಂಗಳ ಹಿಂದೆ ಎತ್ತರದಿಂದ ಬಿದ್ದು ಬೆನ್ನು ಮೂಳೆಯ ಮುರಿತಕ್ಕೆ ಒಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಚಿಕಿತ್ಸೆ ಫಲಿಸದೆ ಇಂದು ನಿಧನರಾದರು.

ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *