ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು,ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ

ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು,
ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ
ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಭೂ ದಾಖಲೆಗೆ ಸಂಬಂಧ ಪಟ್ಟ ಮೂರು ಮಂದಿ ಅಧಿಕಾರಿಗಳನ್ನು ಇಂದು ಬಂಧಿಸಿರುತ್ತಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ.ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳು. ಹೊರಗುತ್ತಿಗೆದಾರನ ಬಾಕಿ ಇರುವ ಸಂಬಳದ ಬಿಲ್ ಮಾಡಿಕೊಡಲು ಮತ್ತು ತನ್ನನ್ನು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿ ಮುಂದುವರಿಸಲು ನೇಮಕಾತಿ ಆದೇಶವನ್ನು ಮಾಡಿಸಿಕೊಡಲು ಕೃಷ್ಣಮೂರ್ತಿ 50 ಸಾವಿರ ರೂಪಾಯಿ, ಬಿ.ಕೆ.ರಾಜು 10 ಸಾವಿರ ರೂ., ಎಸ್.ಧನಶೇಖರ 10 ಸಾವಿರ ರೂ. ಈ ಮೂವರು ಅಧಿಕಾರಿಗಳು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಯುಪಿಒಆರ್‌ನಲ್ಲಿ ಹೊರಗುತ್ತಿಗೆ ನೌಕರರೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಆರೋಪಿಗಳು ಲಂಚ ಸ್ವೀಕರಿಸುವಾಗ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದಿರುತ್ತಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರ ಮಾರ್ಗದರ್ಶನದಂತೆ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್., ರವಿ ಪವಾರ್, ರಾಜೇಂದ್ರ ನಾಯ್ಡ್ ಎಂ.ಎನ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?