
ವಿಶೇಷ ಚೇತನರ ದಿನಾಚರಣೆ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ರಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಶಿವಸದನ ಚಾರಿಟೇಬಲ್ ಟ್ರಸ್ಟ್ ರಿ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ರಿ ದ.ಕ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಿಶೇಷ ಚೇತನ ದಿನಾಚರಣೆ ಅಂಗವಾಗಿ ಮಾಹಿತಿ ಕಾರ್ಯಕ್ರಮವು ಶಿವಸದನ ಮಕ್ಕಳ ವಸತಿ ಶಾಲೆ ಮುರ ಇಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಶ್ರೀ ಯೋಗೇಂದ್ರ ಶೆಟ್ಟಿ ಗೌ.ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು & ಜೆ ಎಂ ಎಫ್ ಸಿ ಪುತ್ತೂರು ಇವರು ಉದ್ಘಾಟಿಸಿ ಮಕ್ಕಳಿಗೆ ಹಣ್ಣು ಹಂಪಲು ನೀಡಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಯದುರಾಜ್ ವೈದ್ಯಾಧಿಕಾರಿಗಳು ಸರಕಾರಿ ಆಸ್ಪತ್ರೆ ಪುತ್ತೂರು ಇವರು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವ ಸದನ ಚಾರಿಟೇಬಲ್ ಟ್ರಸ್ಟ್ ನ ಗೌರವಾಧ್ಯಕ್ಷರಾದ ಶ್ರೀ ರಘುನಾಥ್ ರಾವ್ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜಿ ಜಗನ್ನಾಥ ರೈ, ಖಜಾಂಜಿ ಮಹೇಶ್ ಸವಣೂರು ಕಾರ್ಯಕ್ರಮಕ್ಕೆ ಶುಭ ಕೋರಿದರು. ವೇದಿಕೆಯಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಪ್ಯಾನೆಲ್ ವಕೀಲರು ರಾಜೇಶ್ವರಿ, ಚಂದ್ರಾವತಿ ಉಪಸ್ಥಿತರಿದ್ದರು.
ಶಿವ ಸದನ ಟ್ರಸ್ಟ್ ಶ್ರೀ ಸುವನ್ ಕೃಷ್ಣ ಸ್ವಾಗತಿಸಿ, ಕೋಶಾಧಿಕಾರಿ ಶ್ರೀ ದಿನಕರ ರಾವ್ ವಂದಿಸಿದರು. ಕಾರ್ಯದರ್ಶಿ ಶ್ರೀ ಕರುಣ್ ರಾವ್ ಬೆಳ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ಯಾನೆಲ್ ವಾಲೆಂಟಿಯರ್ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಕಾರ್ಯದರ್ಶಿ ಶ್ರೀಮತಿ ನಯನ ರೈ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಸಿಬಂದಿಯವರಾದ ಶ್ರೀಮತಿ ಜೋತಿ ಹಾಾಗೂೂ ಗಗನ್ ರಾಾಜ್್ ಹಾಾಜರಿದ್ದರು.


