ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು, ಮಾ. 14 ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಮುಂಬರುವ ದಿನಗಳಲ್ಲಿಯೂ ಯಾವುದೇ ಕೊರತೆಯಾಗುವ ಸಾಧ್ಯತೆಯಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಸ್ತುತ ನಿಯಮದಂತೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ನಂತೆ ಗೃಹಬಳಕೆಯ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತಿದೆ. ಸಾರ್ವಜನಿಕರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಅಥವಾ ಏಕಕಾಲಕ್ಕೆ ಹೆಚ್ಚಿನ ಸಿಲಿಂಡರ್ ಕಾಯ್ದಿರಿಸಲು ಪ್ರಯತ್ನಿಸಬೇಡಿ. ಪ್ರಸ್ತುತ ವ್ಯವಸ್ಥೆಯಲ್ಲಿ ಅಂತಹ ಬುಕಿಂಗ್‌ಗಳಿಗೆ ಅವಕಾಶವಿಲ್ಲ” ಎಂದು ತಿಳಿಸಿದರು.

ಲ್‌ಪಿಜಿ ಏಜೆನ್ಸಿಗಳು ಅಕ್ರಮವಾಗಿ ಸಿಲಿಂಡರ್ ದಾಸ್ತಾನು ಮಾಡುವುದನ್ನು ತಡೆಯಲು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯ ಅಧಿಕಾರಿಗಳು ಈಗಾಗಲೇ ಹಲವು ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.ಐಒಸಿಎಲ್ (IOCL), ಬಿಪಿಸಿಎಲ್ (BPCL) ಮತ್ತು ಹೆಚ್‌ಪಿಸಿಎಲ್ (HPCL) ನಂತಹ ಪ್ರಮುಖ ತೈಲ ಕಂಪನಿಗಳ ಜನರಲ್ ಮ್ಯಾನೇಜರ್‌ಗಳೊಂದಿಗೆ ಸಭೆ ನಡೆಸಲಾಗಿದ್ದು, ಸುಗಮ ಪೂರೈಕೆಗೆ ಸೂಚಿಸಲಾಗಿದೆ. ಹೈದರಾಬಾದ್ ಮತ್ತು ತಮಿಳುನಾಡಿನಂತಹ ರಾಜ್ಯಗಳಿಗೆ ಸಾಗಣೆಯಾಗುವ ಎಲ್‌ಪಿಜಿಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದೆ.ಉತ್ಪಾದನೆ ಮತ್ತು ಆಮದು ಸುಗಮ:
ಎಂಆರ್‌ಪಿಎಲ್ (MRPL) ನಲ್ಲಿ ಎಲ್‌ಪಿಜಿ ಉತ್ಪಾದನೆ ಎಂದಿನಂತೆ ಮುಂದುವರಿದಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು ಖಚಿತಪಡಿಸಿದ್ದಾರೆ. ಅಲ್ಲದೆ, ಐಒಸಿಎಲ್ ಸಂಸ್ಥೆಗೆ ಅಗತ್ಯವಿರುವ ಎಲ್‌ಪಿಜಿ ಆಮದು ಪ್ರಕ್ರಿಯೆಯೂ ಸುಗಮವಾಗಿ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.”ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿ ಬರುವವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಮಸ್ಯೆಯೂ ಶೀಘ್ರದಲ್ಲೇ ಬಗೆಹರಿಯಲಿದ್ದು, ಆತಂಕ ಪಡುವ ಅಗತ್ಯವಿಲ್ಲ” ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಭರವಸೆ ನೀಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?