ಉಡುಪಿ ಜಿಲ್ಲೆಯ ಮೂವರು ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ ಎಸ್ಪಿ.

ಹಿರಿಯಡ್ಕ ಪೊಲೀಸ್‌ ಠಾಣಾ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆ ನಿವಾಸಿ ಸಂದೇಶ ನಾಯ್ಕ್, ಹಿರಿಯಡ್ಕ ಪಾಪುಜೆ ದರ್ಖಾಸು ನಿವಾಸಿ ಸುಶಾಂತ್ ಪೂಜಾರಿ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್ ಗಡಿಪಾರುಗೊಂಡ ಆರೋಪಿಗಳು.

ಜಬ್ಬಾರ್ ಹುಸೈನ್ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಶೀಟ‌ರ್ ತೆರೆಯಲಾಗಿದ್ದು, ಈತನ ವಿರುದ್ಧ ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಹಾಗೂ ಮಂಗಳೂರ ನಗರದಲ್ಲಿ ಈವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ಸಂದೇಶ ವಿರುದ್ಧ ಐದು ಪ್ರಕರಣ ದಾಖಲಾಗಿದ್ದು, ರೌಡಿ ಶೀಟರ್ ತೆರೆಯಲಾಗಿದೆ. ಸುಶಾಂತ್ ಪೂಜಾರಿ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.

ಜಬ್ಬಾರ್ ಹುಸೇನ್‌ನನ್ನು ಹಾಸನ ಜಿಲ್ಲೆಯ ಪೆನ್ನನ್ ಮೊಹಲ್ಲಾ ಠಾಣಾ ವ್ಯಾಪ್ತಿಗೆ, ಸಂದೇಶ್ ನಾಯ್ಕನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಗೆ ಹಾಗೂ ಸುಶಾಂತ್ ಪೂಜಾರಿಯನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!