HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಶ್ರೀ ನವೀನ್ ಕುಮಾರ್ ಎಂ.ಜಿ ಅವರು ಕಳೆದ ನಾಲ್ಕು ವರ್ಷಗಳಿಂದ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳನ್ನೊಳಗೊಂಡ ಮಂಗಳೂರು ಪ್ರಾದೇಶಿಕ ವಿಭಾಗದ ಸಂಪೂರ್ಣ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಇದೀಗ ಕೊಚ್ಚಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏಪ್ರಿಲ್ 9, 2026ರಂದು ಯೆಕ್ಕೂರಿನ ಎ.ಜೆ. ಎಲೈಟ್ ಹೋಟೆಲ್‌ನಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ HPCL MACO ಸೊಸೈಟಿ ಪೆಟ್ರೋಲ್ ಪಂಪ್‌ನ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ನವೀನ್ ಕುಮಾರ್ ಅವರ ಸೇವೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ HPCL ಮಂಗಳೂರು ಟರ್ಮಿನಲ್‌ನ ಡಿಜಿಎಂ ಅನಿಲ್ ಕೌಶಿಕ್, ಮಂಗಳೂರು ಸೇಲ್ಸ್ ಅಧಿಕಾರಿ ಇಶಿತಾ ಗರ್ಗ್, ಉಡುಪಿ ಸೇಲ್ಸ್ ಅಧಿಕಾರಿ ಅನುಷ್ ಲಾಲ್, ಪ್ಲಾನಿಂಗ್ ಮ್ಯಾನೇಜರ್ ರಾಜೇಂದ್ರ, MIS ಮ್ಯಾನೇಜರ್ ದಿನೇಶ್ ಬಂಗೇರ ಉಪಸ್ಥಿತರಿದ್ದರು. ನಿವೃತ್ತ HPCL ಅಧಿಕಾರಿಗಳಾದ ವಸಂತ ರೈ ಮತ್ತು ಪ್ರಕಾಶ್ ಪುತ್ತೂರು ಸಹ ಭಾಗವಹಿಸಿದ್ದರು.

ಅಖಿಲ ಭಾರತ ಪೆಟ್ರೋಲಿಯಂ ಒಕ್ಕೂಟದ ಕಾರ್ಯದರ್ಶಿ ವಿಶ್ವಾಸ್ ಶೆಣೈ, ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಪೆಟ್ರೋಲಿಯಂ ಸಂಘದ ಮಾಜಿ ಅಧ್ಯಕ್ಷ ಸತೀಶ್ ಕಾಮತ್, ಮಾಜಿ ಕಾರ್ಯದರ್ಶಿ ಸುಧೀರ್ ಭಟ್, ಪ್ರಸ್ತುತ ಖಜಾಂಚಿ ಪ್ರಕಾಶ್ ಶೆಣೈ, ರಾಜ್ಯ ಪೆಟ್ರೋಲಿಯಂ ಒಕ್ಕೂಟದ ಮುರಳೀಧರ ಪ್ರಭು, ಮಾಜಿ ಡೀಲರ್ ಪದ್ಮನಾಭ ಪೈ ಹಾಗೂ ಇತರ ಡೀಲರ್‌ಗಳು ಸೇರಿ ನವೀನ್ ಕುಮಾರ್ ಅವರಿಗೆ ಯೋಗ್ಯವಾದ ಗೌರವ ಸಲ್ಲಿಸಿದರು.

ಚಿಕ್ಕಮಗಳೂರು, ಕಡೂರು, ಶ್ರೀಂಗೇರಿ ಹಾಗೂ ಮಲೆನಾಡು ಪರಿಸರದ ಅನೇಕ ಡೀಲರ್‌ಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?