D Sudhakar: ಚಿಕಿತ್ಸೆ ಫಲಕಾರಿಯಾಗದೆ ಸಚಿವ ಸುಧಾಕರ್ ನಿಧನ

ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (Minister D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು.

ಮೊಣಕಾಲು ಶಸ್ತ್ರಚಿಕಿತ್ಸೆ

ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

News Editor

Learn More →

Leave a Reply

Your email address will not be published. Required fields are marked *