ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ!!

ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ.

ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆ ಮಾಡುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ.

ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಪುರುಷ ಕಾಣೆಯಾಗಿರುವ ಕುರಿತು ದೂರು ದಾಖಲಾಗಿದ್ದರೆ ಅಥವಾ ಮೃತರ ಬಗ್ಗೆ ಮಾಹಿತಿ ತಿಳಿದಿರುವವರು ತಕ್ಷಣ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು 9480805362 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *