ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಮಟ್ಕಾ ಬುಕ್ಕಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಕಳ ಬಸ್ ನಿಲ್ದಾಣದ ಬಳಿ ಮಟ್ಕಾ ನಡೆಸುತ್ತಿದ್ದ ವೀರೇಂದ್ರ ಶೆಟ್ಟಿಯನ್ನು ಬಂಧಿಸಿ, ನಗದು, ಮಟ್ಕಾ ಚೀಟಿ, ಮೊಬೈಲ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಇದೇ ರೀತಿ ಬ್ರಹ್ಮಾವರ ಠಾಣೆ ವ್ಯಾಪ್ತಿಯ ಹಂದಾಡಿ ಮತ್ತು ಚಾಂತಾರು ಪ್ರದೇಶಗಳಲ್ಲಿ ನಡೆಸಿದ ಎರಡು ಪ್ರತ್ಯೇಕ ದಾಳಿಗಳಲ್ಲಿ ಕುಶಾಲ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯನ್ನು ಬಂಧಿಸಲಾಗಿದೆ. ಅವರಿಂದ ನಗದು, ಮಟ್ಕಾ ಚೀಟಿಗಳು ಹಾಗೂ ಪೆನ್ನುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಾಂತಾರು ಪ್ರಕರಣದ ತನಿಖೆ ವೇಳೆ ದೊರೆತ ಮಾಹಿತಿಯ ಆಧಾರದಲ್ಲಿ, ಮಟ್ಕಾ ಜಾಲದ ಪ್ರಮುಖ ಬುಕ್ಕಿ ಲೀಯೋ ಕರ್ನೆಲಿಯೋನನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಮಿಷನ್ ಆಧಾರದ ಮೇಲೆ ಅಕ್ರಮ ಮಟ್ಕಾ ಜುಗಾರಿ ನಡೆಸುತ್ತಿದ್ದ ಬಗ್ಗೆ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣಗಳು ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.


