ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವಕನ ಬಂಧನ- 1.2 ಕೆಜಿ ಗಾಂಜಾ ವಶ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆ.17ರಂದು ಗಾಂಜಾ ಸೇವನೆ ಪ್ರಕರಣದಲ್ಲಿ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ವಿಚಾರಣೆಗೊಳಪಡಿಸಿದ ವೇಳೆ, ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.ಈ ಮಾಹಿತಿ ಆಧರಿಸಿ ಆ.18ರಂದು ಕದ್ರಿ ಗ್ರಾಮದ ಪದವು ಮೈದಾನದ ಬಳಿಯ ಆಯುರ್ವೇದ ಕ್ಲಿನಿಕ್‌ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ನಿತಿನ್ ಕೃಷ್ಣನ್ (27) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯಿಂದ ₹60 ಸಾವಿರ ಮೌಲ್ಯದ 1.206 ಕೆಜಿ ಗಾಂಜಾ, ಮೊಬೈಲ್ ಫೋನ್ ಹಾಗೂ ಕೆಎಲ್-86-2397 ನೋಂದಣಿ ಸಂಖ್ಯೆಯ KTM ಮೋಟಾರ್ ಸೈಕಲ್‌ನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *