ಪುತ್ತೂರು: ಅಕ್ರಮ ಜಾನುವಾರು ಸಾಗಾಟ- ವಾಹನ ಸಹಿತ ಆರೋಪಿಯ ಬಂಧನ

ಪುತ್ತೂರು: ಪುತ್ತೂರಿನ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪಿಎಸ್‌ಐ ಸುರೇಶ್‌ ಸಿ.ಟಿ. ಅವರು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಪುತ್ತೂರು ಚಿಕ್ಕ ಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19 D 0948 ನೋಂದಣಿಯ ಪಿಕ್-ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿದೆ.ಪಿಕ್-ಅಪ್ ಚಾಲಕ ಮಹಮ್ಮದ್ ಜಬ್ಬಾರ್ ವಿಚಾರಣೆ ವೇಳೆ, ಜಾನುವಾರುಗಳನ್ನು ಶಾಂತಿಗೋಡು ಗ್ರಾಮದ ಅಶೋಕ್ ಎಂಬವರಿಂದ ಖರೀದಿಸಿ ಯಾವುದೇ ಪರವಾನಿಗೆ ಇಲ್ಲದೆ ವಧೆ ಉದ್ದೇಶಕ್ಕೆ ಸಾಗಿಸುತ್ತಿದ್ದಾಗಿ ತಿಳಿಸಿದ್ದಾನೆ.ಜಾನುವಾರು ಸಹಿತ ವಾಹನ ಮತ್ತು ಆರೋಪಿಯನ್ನು ವಶಕ್ಕೆ ಪಡೆದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ. 101/2026, ಕಲಂ 11(D) ಪ್ರಾಣಿ ಹಿಂಸಾ ಕಾಯ್ದೆ ಮತ್ತು ಕಲಂ 4,5,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಹಾಗೂ ಕಲಓಕೆ 66/Rw 192(A) IMV Act do ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Star Of Kudla

Learn More →

Leave a Reply

Your email address will not be published. Required fields are marked *