ಆ.31ರಂದು “ಪುತ್ತೂರು ಚಲೋ” : ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಪ್ರತಿಭಟನೆ

ಪುತ್ತೂರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ಪುತ್ತೂರು ಚಲೋ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಜ್ಜಾಗಿದೆ.

ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಪ್ರಮುಖರು, ಮಂಡಲದ ಪ್ರಮುಖರು ಹಾಗೂ ಪುತ್ತೂರು ಬಿಜೆಪಿಯ ವಿವಿಧ ಹಂತದ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.

ಅನ್ಯಾಯ, ಅಕ್ರಮ, ದೌರ್ಜನ್ಯ ಮತ್ತು ಅಧಿಕಾರದ ದುರುಪಯೋಗದ ವಿರುದ್ಧ ಪುತ್ತೂರಿನ ಜನರ ಧ್ವನಿಯಾಗಿ ಬಿಜೆಪಿ ಹೋರಾಟ ನಡೆಸಲಿದೆ. ಜನರ ಹಕ್ಕು, ಶಾಂತಿ ಮತ್ತು ನ್ಯಾಯಕ್ಕಾಗಿ ಯಾವುದೇ ಒತ್ತಡಕ್ಕೂ ಮಣಿಯದೆ ಹೋರಾಟ ಮುಂದುವರಿಸುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಇದೇ ಆಗಸ್ಟ್ 31ರ ಸೋಮವಾರ ಬೆಳಿಗ್ಗೆ 10.30ಕ್ಕೆ, ದರ್ಬೆ ವೃತ್ತದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ “ಪುತ್ತೂರು ಚಲೋ” ನಡೆಯಲಿದೆ. ನ್ಯಾಯಕ್ಕಾಗಿ, ಪುತ್ತೂರಿನ ಹಿತಕ್ಕಾಗಿ, ಅನ್ಯಾಯದ ವಿರುದ್ಧ ಒಂದಾಗಿ ನಿಲ್ಲೋಣ.

ಪುತ್ತೂರಿನ ಸಮಸ್ತ ನಾಗರಿಕರು ಹಾಗೂ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ “ಪುತ್ತೂರು ಚಲೋ”ವನ್ನು ಯಶಸ್ವಿಗೊಳಿಸಬೇಕಾಗಿ ಬಿಜೆಪಿ ಮನವಿ ಮಾಡಿದೆ.

Star Of Kudla

Learn More →

Leave a Reply

Your email address will not be published. Required fields are marked *