ಪುತ್ತೂರು ಪ್ರೆಸ್ ಕ್ಲಬ್ ಎದುರುಗಡೆ ಗಲಾಟೆ: ಹಕೀಮ್ ಕೂರ್ನಡ್ಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪುತ್ತೂರು: ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಉಂಟಾದ ಗೊಂದಲ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಕೀಮ್ ಕೂರ್ನಡ್ಕ ಅವರು ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಹಕೀಮ್ ಕೂರ್ನಡ್ಕ ಅವರು ತಮ್ಮ ವಿಚಾರಗಳನ್ನು ಮಾಧ್ಯಮಗಳ ಮುಂದೆ ಮಂಡಿಸುತ್ತಿದ್ದ ವೇಳೆ, ಪುತ್ತೂರು ಶಾಸಕ ಅಶೋಕ್ ರೈ ಅವರ ಬೆಂಬಲಿಗರು ಎಂದು ಹೇಳಲಾಗುತ್ತಿರುವ ಕೆಲವರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.


ಈ ಸಂದರ್ಭದಲ್ಲಿ ಉಂಟಾದ ಒತ್ತಡ ಹಾಗೂ ಉದ್ವಿಗ್ನ ಪರಿಸ್ಥಿತಿಯಿಂದ ಅಕೀಮ್ ಕೂರ್ನಡ್ಕ ಅವರು ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಗಮನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Star Of Kudla

Learn More →

Leave a Reply

Your email address will not be published. Required fields are marked *