ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗಳಿಗೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ಭ್ರಷ್ಟಾಚಾರ ಕುರಿತು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗ್ರಾಪಂ ಕಚೇರಿಗಳಿಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕುವೆಟ್ಟು ಮತ್ತು ಮಡಂತ್ಯಾರು ಗ್ರಾಪಂ ಕಚೇರಿಗಳಿಗೆ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿ ಒಟ್ಟು ಏಂಟು ಮಂದಿಯ ತಂಡ ಆಗಮಿಸಿದ್ದು, ಕಡತಗಳನ್ನು ಪರಿಶೀಲಿಸುತ್ತಿದೆ. ಸಂಜೆ ತನಕ ಇದು ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.


