ಪುತ್ತೂರು: ವಿದ್ಯಾರ್ಥಿನಿ ಹಾಸ್ಟೆಲ್‌ ಗೆ ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರ ಬಟ್ಟೆ ಕಳವು- ಆರೋಪಿ ಬಂಧನ

ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು ಬೆಳಗ್ಗಿನ ಜಾವ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ ಅಪರಿಚಿತ ಯುವಕನೋರ್ವ, ವಿದ್ಯಾರ್ಥಿನಿಯರು ಒಣಗಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗಿದ್ದ. ಬಟ್ಟೆಗಳು ಕಾಣೆಯಾದ ಬಗ್ಗೆ ವಿದ್ಯಾರ್ಥಿನಿಯರು ನೀಡಿದ ಮಾಹಿತಿಯಂತೆ ಹಾಸ್ಟೆಲ್ ಮೇಲ್ವಿಚಾರಕಿ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಕಳ್ಳತನದ ದೃಶ್ಯ ಬೆಳಕಿಗೆ ಬಂದಿದೆ.

ಈ ಕುರಿತು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸೆಪ್ಟೆಂಬರ್ 7 ರಂದು ಆರೋಪಿ ಕೆ. ರಾಮಚಂದ್ರನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಸೆಪ್ಟೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Star Of Kudla

Learn More →

Leave a Reply

Your email address will not be published. Required fields are marked *