ಬೆಳ್ತಂಗಡಿ: ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ..!! ಹಲವರಿಗೆ ಗಾಯ

ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗವೂ ಹಾನಿಗೊಂಡಿದೆ.

ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Star Of Kudla

Learn More →

Leave a Reply

Your email address will not be published. Required fields are marked *