ಮಹಿಳೆಯನ್ನು ಭೀಕರವಾಗಿ ಕೊಲೆಗೈದು ಆಕೆಯ ಶವದ ಮೇಲೆ ಪಾಪಿಗಳು ಮಗುವನ್ನು ಮಲಗಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ನಲ್ಲಿ ಈ ಒಂದು ಅಮಾನವೀಯ ಕೃತ್ಯ ನಡೆದಿದೆ.

ಕಲ್ಲಿನಿಂದ ಜಜ್ಜಿ 26 ವರ್ಷದ ಗೃಹಿಣಿ ಸ್ನೇಹಳನ್ನು ಬೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಆಕೆಯ ಶವದ ಮೇಲೆ ಮಗುವನ್ನು 2 ವರ್ಷದ ಮಗುವನ್ನು ಮಲಗಿಸಿದ್ದಾರೆ. ಪಶ್ಚಿಮ ಬಂಗಾಳದವರು ಪುನರ್ವಸತಿ ಕೇಂದ್ರದಲ್ಲಿ ವಾಸಿಸುತ್ತಿದ್ದು ಆ ಒಂದು ಸಮುದಾಯಕ್ಕೆ ಸ್ನೇಹ ಸೇರಿದ್ದಾಳೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದ್ದು, ಪ್ರಕರಣದ ಹಿನ್ನೆಲೆ ನೋಡುವುದಾದರೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಸ್ನೇಹವನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಆದರೆ ಯಾರು ಕೊಲೆ ಮಾಡಿದ್ದಾರೆ ಎನ್ನುವುದು ಇದುವರೆಗೂ ತಿಳಿದುಬಂದಿಲ್ಲ ಹಾಗಾಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


