ಉಪ್ಪಿನಂಗಡಿ: ದಂಪತಿಗಳ ನಡುವೆ ಗಲಾಟೆ- ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ- ಓರ್ವ ಮಗು ಸಾವು!!

ಉಪ್ಪಿನಂಗಡಿ : ಇವತ್ತು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್‌ಪಿ ಅವರು ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು. ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್‌ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 2) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Star Of Kudla

Learn More →

Leave a Reply

Your email address will not be published. Required fields are marked *