ಮಂಗಳೂರು: ಜೋಕಟ್ಟೆ–ಎಂಆರ್‌ಪಿಎಲ್ ಪ್ರದೇಶದಲ್ಲಿ ಭಾರೀ ಸ್ಫೋಟ: ಕಂಪಿಸಿದ ಮನೆಗಳು!!

ಮಂಗಳೂರು ನಗರದ ಜೋಕಟ್ಟೆ ಹಾಗೂ ಎಂಆರ್‌ಪಿಎಲ್  ಪ್ರದೇಶದಲ್ಲಿ ಬುಧವಾರ ಭಾರೀ ಶಬ್ಧದೊಂದಿಗೆ ಸ್ಫೋಟ ಸಂಭವಿಸಿದೆ.

ಸ್ಫೋಟದ ತೀವ್ರ ಶಬ್ಧಕ್ಕೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಹಲವು ಮನೆಗಳು ಕಂಪಿಸಿದವು. ಕೆಲ ಮನೆಗಳ ಬಾಗಿಲು ಹಾಗೂ ಕಿಟಕಿಗಳು ಉದುರಿ ಬಿದ್ದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಿಂದ ಕೆಲಕಾಲ ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಫೋಟದ ನಿಖರ ಸ್ಥಳ, ಕಾರಣ ಹಾಗೂ ಘಟನೆಯಿಂದ ಉಂಟಾಗಿರುವ ಹಾನಿಯ ಪ್ರಮಾಣದ ಕುರಿತು ಸದ್ಯಕ್ಕೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆ ಹಾಗೂ ಎಂಆರ್‌ಪಿಎಲ್ ಸಂಸ್ಥೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. 

Star Of Kudla

Learn More →

Leave a Reply

Your email address will not be published. Required fields are marked *