ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟರಾದ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ (Chikkanna) ಮತ್ತು ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ (CCH Court) ಸಮನ್ಸ್ ಜಾರಿ ಮಾಡಿದೆ.

ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಇಬ್ಬರೂ ನಟರು, ಕೊಲೆಗೂ ಮುನ್ನ ಆರೋಪಿ ದರ್ಶನ್ (Darshan) ಭಾಗವಹಿಸಿದ್ದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯ ನೀಡುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಹೆಚ್ ಕೋರ್ಟ್, ಅಕ್ಟೋಬರ್ 13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಇಬ್ಬರು ನಟರಿಗೆ ಸೂಚಿಸಿದೆ. ನಟ ಚಿಕ್ಕಣ್ಣ ಅವರಿಗೆ CW-80 ಹಾಗೂ ನಟ ಯಶಸ್ ಸೂರ್ಯ ಅವರಿಗೆ CW-98 ಎಂದು ಸಮನ್ಸ್ ಜಾರಿಯಾಗಿದೆ.

ಬೆಂಗಳೂರಿನ ಸ್ಟೋನಿ ಬ್ರೂಕ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಇಬ್ಬರೂ ನಟರು ದರ್ಶನ್ ಜೊತೆಗೆ ಭಾಗವಹಿಸಿದ್ದರು ಎನ್ನಲಾಗಿದೆ. ಈ ಕುರಿತು ನ್ಯಾಯಾಲಯದಲ್ಲಿ ಸಾಕ್ಷ್ಯ ನೀಡುವಂತೆ ಇಬ್ಬರಿಗೂ ಸಮನ್ಸ್ ಜಾರಿ ಮಾಡಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *