ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹತ್ಯೆ ಪ್ರಕರಣ: ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ SIT ಸಭೆ

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ಮಂಗಳವಾರ ಮಂಗಳೂರಿನಲ್ಲಿ ಸಭೆ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಎಸ್ಐಟಿ ಕಚೇರಿಯಲ್ಲಿ ಎಸ್ ಐಟಿ ಮುಖ್ಯಸ್ಥ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆದಿದೆ.

ಎಸ್ ಐಟಿ ತಂಡ ಇನ್ನೆರಡು ದಿನದಲ್ಲಿ ಬೆಳ್ತಂಗಡಿಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆಗೈಯಲಾಗಿತ್ತು. ಈ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಸೂಚಿಸಿದೆ. ಎಸ್ಐಟಿ ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.

Star Of Kudla

Learn More →

Leave a Reply

Your email address will not be published. Required fields are marked *