ಪುತ್ತೂರು: ಸ್ಥಳೀಯವಾಗಿ ಕೂಲಿ ಕೆಲಸ ಮಾಡಿಕೊಂಡಿದ್ದ ಪುರುಷೋತ್ತಮ (42 ವರ್ಷ) ಎಂಬ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ಪಜಿರೋಡಿ ನಿವಾಸಿ ಶ್ರೀಮತಿ ರುಕ್ಮಿಣಿ (32) ಎಂಬವರ ಪತಿ ಪುರುಷೋತ್ತಮ ಅವರು ದಿನಾಂಕ 12-10-2026 ರಂದು ಬೆಳಗ್ಗೆ ಸುಳ್ಯ ತಾಲೂಕಿನ ಪಂಜಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಬಳಿಕ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಈ ಸಂಬಂಧ ರುಕ್ಮಿಣಿ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಮನುಷ್ಯ ಕಾಣೆ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ವಿವರ:
ಹೆಸರು: ಪುರುಷೋತ್ತಮ
ವಯಸ್ಸು: 42 ವರ್ಷ
ಮೈಕಟ್ಟು/ಎತ್ತರ: ಸಾಧಾರಣ ಮೈಕಟ್ಟು, ಸುಮಾರು 5 ಅಡಿ ಎತ್ತರ
ಮೈಬಣ್ಣ/ಕೂದಲು: ಎಣ್ಣೆಕಪ್ಪು ಮೈಬಣ್ಣ, ಕಪ್ಪು ತಲೆಕೂದಲು
ಮಾತನಾಡುವ ಭಾಷೆಗಳು: ತುಳು, ಕನ್ನಡ ಹಾಗೂ ಮಲಯಾಳಂ
ಧರಿಸಿದ್ದ ಬಟ್ಟೆ: ಆಕಾಶ ನೀಲಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್
ಇವರ ಬಗ್ಗೆ ಯಾವುದೇ ಸುಳಿವು ದೊರೆತಲ್ಲಿ ಸಾರ್ವಜನಿಕರು ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಕೋರಿದೆ:
ಪುತ್ತೂರು ನಗರ ಪೊಲೀಸ್ ಠಾಣೆ: 08251-230555
ಪೊಲೀಸ್ ನಿರೀಕ್ಷಕರು, ಪುತ್ತೂರು ನಗರ ಪೊಲೀಸ್ ಠಾಣೆ: 9480805361
ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪ ವಿಭಾಗ: 9480805321
ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ದ.ಕ. ಜಿಲ್ಲೆ, ಮಂಗಳೂರು: 9480805302
ಪೊಲೀಸ್ ಅಧೀಕ್ಷಕರು, ದ.ಕ. ಜಿಲ್ಲೆ, ಮಂಗಳೂರು: 9480805301


