ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕೇಸ್‌ಗೆ ಬಿಗ್ ಟ್ವಿಸ್ಟ್!! ದೆಹಲಿಯಲ್ಲಿ ಮೊದಲ ಆರೋಪಿ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಗುರಿಯಾಗಿಸಿಕೊಂಡು ಮಾಡಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸೈಬರ್ ಕ್ರೈಂ ವಿಭಾಗದ ವಿಶೇಷ ತಂಡವು ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನ ಬಂಧಿಸಿದೆ.

ಇದು ಈ ಪ್ರಕರಣದಲ್ಲಿ ನಡೆದಿರುವ ಮೊದಲ ಬಂಧನವಾಗಿದ್ದು, ನಕಲಿ ವಿಡಿಯೋ ಹರಿಬಿಟ್ಟ ಜಾಲದ ಬೇರುಗಳನ್ನ ಭೇದಿಸಲು ಪೊಲೀಸರು ಮುಂದಾಗಿದ್ದಾರೆ

ಸೋಶೀಯಲ್‌ ಮೀಡಿಯಾದಲ್ಲಿ ಈ ವಿವಾದಾತ್ಮಕ ವಿಡಿಯೋವನ್ನ ಮೊದಲು ಯಾರು ಅಪ್‌ಲೋಡ್ ಮಾಡಿದರು ಮತ್ತು ಅದನ್ನ ಯಾವ ರೀತಿ ವೈರಲ್ ಮಾಡಲಾಯಿತು ಎಂಬುದರ ಕುರಿತು ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತನಿಖೆಯ ವೇಳೆ ಡಿಜಿಟಲ್ ಹೆಜ್ಜೆಗುರುತುಗಳನ್ನ ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಅಪ್‌ಲೋಡ್ ಮಾಡಲು ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ ಬಳಸಿರುವುದು ಪತ್ತೆಯಾಗಿದೆ. ಈ ಮೊಬೈಲ್ ಫೋನ್ ಮತ್ತು ಬಂಧಿತ ಆರೋಪಿಗೂ ಇರುವ ನಂಟಿನ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಬಂಧನಕ್ಕೆ ಒಳಗಾಗಿರುವ ಆರೋಪಿಯನ್ನ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಈತನನ್ನು ದೆಹಲಿಯಲ್ಲಿ ವಶಕ್ಕೆ ಪಡೆದಿರುವ ವಿಶೇಷ ಪೊಲೀಸ್ ತಂಡ, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತಂದಿದೆ.

ವಿಡಿಯೋವನ್ನ ಸೋಶೀಯಲ್‌ ಮೀಡಿಯಾಗಳಲ್ಲಿ, ವಿಶೇಷವಾಗಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳಲು ಬಳಸಲಾದ ಲಿಂಕ್‌ಗಳ ಮೂಲವನ್ನ ಪತ್ತೆಹಚ್ಚುವಲ್ಲಿ ಈತನ ವಿಚಾರಣೆ ಪ್ರಮುಖ ಪಾತ್ರ ವಹಿಸಲಿದೆ.

ವಿಡಿಯೋ ರೆಕಾರ್ಡಿಂಗ್ ಮಾಡಿದವರು ಯಾರು? ಈ ಪಿತೂರಿಯ ಹಿಂದೆ ಯಾರಿದ್ದಾರೆ? ಎಂಬುದರ ಸಂಪೂರ್ಣ ಮಾಹಿತಿಯನ್ನ ರಿತೇಶ್ ಪಾಂಡೆ ಬಾಯ್ಬಿಡುವ ಸಾಧ್ಯತೆ ಇದೆ.

Star Of Kudla

Learn More →

Leave a Reply

Your email address will not be published. Required fields are marked *