ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. 2012 ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ಎಸ್‌ಐಟಿ (SIT) ಬುಲಾವ್ ನೀಡಿದೆ.
ಯೋಗೇಶ್ ಅವರಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಯೋಗೇಶ್ ವಿರುದ್ಧ ಸೌಜನ್ಯ ಪೋಷಕರು ಗುರುತರ ಆರೋಪ ಹೊರಿಸಿದ್ದರು. ತನಿಖೆಯ ಪ್ರಾಥಮಿಕ ಹಂತದಲ್ಲೇ ಸಾಕ್ಷಿ ನಾಶದ ಆರೋಪ ಇವರ ವಿರುದ್ಧ ಕೇಳಿಬಂದಿತ್ತು.
ಇದೀಗ ಯೋಗೇಶ್ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದ್ದು, ಈ ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠವು ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿತ್ತು. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಯಾವುದೇ ಅಧಿಕಾರಿಯನ್ನು ಹೊಸ ತಂಡದಲ್ಲಿ ಸೇರಿಸಿಕೊಳ್ಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ಕೂಡಾ ನ್ಯಾಯಾಲಯ ನೀಡಿತ್ತು. ಮುಂದಿನ 3 ತಿಂಗಳ ಒಳಗಾಗಿ ಸಮಗ್ರ ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಗಡುವು ವಿಧಿಸಿತ್ತು


