ಕಡಬ: ಪಿಕಪ್-ಕಾರು ನಡುವೆ ಭೀಕರ ಅಪಘಾತ!! ಓರ್ವ ಸಾವು, ಮತ್ತೋರ್ವ ಗಂಭೀರ

ಕಡಬ : ಹಣ್ಣು–ಹಂಪಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು–ಹಂಪಲು ಸಾಗಿಸುತ್ತಿದ್ದ ಪಿಕಪ್ ವಾಹನ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿನ ನಡುವೆ ನೆಕ್ಕರೆ ಬಳಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಪಿಕಪ್ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲು ಮುಂದಾದರಾದರೂ, ಗಾಯಾಳುಗಳಲ್ಲಿ ಒಬ್ಬರು ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡಿರುವ ಮತ್ತೋರ್ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *