ಮನೆಯ ಮೇಲ್ಛಾವಣಿಯಿಂದ ಬಿದ್ದು ಮೂಡುಬಿದಿರೆ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಸಾವು

ಮೂಡುಬಿದಿರೆ : ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಗುರುವಾರ ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್, ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಅಲ್ಲದೆ, ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಕಡೆಗೆ ಬದಲಿ ಕೆಲಸಗಾರನಾಗಿ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ. ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ಸಂತೋಷ್ ಅವರು ಪತ್ನಿ ಹಾಗೂ ಒಂದು ಪುಟ್ಟ ಮಗುವನ್ನು ಅಗಲಿದ್ದಾರೆ.

ಜನಪ್ರತಿನಿಧಿಯಾಗಿ ಸಕ್ರಿಯರಾಗಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *