ಪುತ್ತೂರು ಕ್ಷೇತ್ರದ ಸೋಲಿಗೆ ಹಿಂದೂ ವಿಚಾರ ಕಾರಣವೇ? ಆರ್. ಅಶೋಕ್ ಹೇಳಿಕೆಗೆ ಅರುಣ್ ಕುಮಾರ್ ಪುತ್ತಿಲ ತಿರುಗೇಟು

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಹಿಂದೂ, ಹಿಂದೂ ಎಂದು ಹೇಳಿದ ಕಾರಣಕ್ಕೆ ಬಿಜೆಪಿಗೆ ಸೋಲಾಯಿತು ಎಂಬ ಬಿಜೆಪಿ ಮುಖಂಡ ಆರ್. ಅಶೋಕ್ ಅವರ ಹೇಳಿಕೆಗೆ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದಾರೆ.

ಆರ್. ಅಶೋಕ್ ಅವರು ಯಾರನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ ಎಂಬುದನ್ನು ಅವರನ್ನೇ ಕೇಳಬೇಕು. ಆದರೆ ನಾನು ಕಳೆದ 35 ವರ್ಷಗಳಿಂದ ಧರ್ಮದ ವಿಚಾರದಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಧರ್ಮದ ವಿರುದ್ಧ ಕೆಲಸಗಳು ನಡೆದಾಗ, ಧಾರ್ಮಿಕ ಶ್ರದ್ಧಾಕೇಂದ್ರಗಳ ವಿರುದ್ಧ ಷಡ್ಯಂತ್ರಗಳು ನಡೆದಾಗ, ಹಿಂದೂಗಳ ಪೂಜ್ಯ ಗೋಮಾತೆಯ ಹತ್ಯೆಯ ವಿಚಾರ ಬಂದಾಗ ಹಾಗೂ ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣುಮಕ್ಕಳನ್ನು ಮೋಸದ ಜಾಲಕ್ಕೆ ಸಿಲುಕಿಸಿದಾಗ ಅದರ ವಿರುದ್ಧ ಧ್ವನಿ ಎತ್ತಿ ಹೋರಾಟ ನಡೆಸಿದ್ದೇನೆ ಎಂದು ಹೇಳಿದರು.

ನನ್ನ ಜೀವನದ ಕೊನೆಯ ದಿನದವರೆಗೂ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತೇನೆ. ಯಾವುದೇ ಬೇರೆ ಅಪೇಕ್ಷೆಗಾಗಿ ಈ ಹಿಂದೆ ಕೆಲಸ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಅರುಣ್ ಕುಮಾರ್ ಪುತ್ತಿಲ ಸ್ಪಷ್ಟಪಡಿಸಿದರು.

ಇದೇ ವೇಳೆ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳ ಸಿದ್ಧತೆ ಕುರಿತು ಮಾತನಾಡಿದ ಅವರು, ಕಾರ್ಯಕರ್ತರ ಅಭಿಪ್ರಾಯದಂತೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಬೂತ್ ಮಟ್ಟದ ಆಕಾಂಕ್ಷಿಗಳಿಗೂ ಅವಕಾಶ ನೀಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದರು.

Star Of Kudla

Learn More →

Leave a Reply

Your email address will not be published. Required fields are marked *