ಕಿರುಬೇಲೆ ಮೂಲ ನಿವಾಸಿಗಳ ಸಂಚಾರ ದಾರಿ ಮುಕ್ತಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಮನವಿ

ಕುಮಟಾ: ಕುಮಟಾ ತಾಲೂಕಿನ ಕಾಗಾಲ ಗ್ರಾಮದ ಕಿರುಬೇಲೆ ಮೂಲ ನಿವಾಸಿಗಳು ಅನಾದಿ ಕಾಲದಿಂದಲೂ ಗುಡ್ಡ-ಬೆಟ್ಟದ ಮೂಲಕ ಬಳಸುತ್ತಿದ್ದ ಸಂಚಾರ ದಾರಿ ಮುಕ್ತಗೊಳಿಸುವಂತೆ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟವು ಗುರುವಾರ ಜಿಲ್ಲಾಧಿಕಾರಿ ಮುಖಾಂತರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಮನವಿ ಸಲ್ಲಿಸಿದೆ.

ಸುಮಾರು 10 ರಿಂದ 12 ಕುಟುಂಬಗಳ ವಾಸವಾಗಿರುವ ಕಿರಬೇಲೆ ಗ್ರಾಮಸ್ಥರು ಸಮುದ್ರ ದಂಡೆ, ಜಟಗೇಶ್ವರ ದೇವಸ್ಥಾನ, ಗುರುಮಠ, ಐತಿಹಾಸಿಕ ಕೋಟೆ, ಗುಹೆ, ಸ್ಮಶಾನ ಹಾಗೂ ಹೊರ ಊರುಗಳ ಸಂಪರ್ಕಕ್ಕಾಗಿ ಈ ದಾರಿಯನ್ನು ಬಳಸಿ ಬರುತ್ತಿದ್ದಾರೆ. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲೇ ರೈತರ ಹಿತದೃಷ್ಟಿಯಿಂದ ಈ ದಾರಿಗೆ ಹಕ್ಕು ನೀಡಲಾಗಿದ್ದು, ಸರ್ಕಾರದ ಅನುದಾನದ ನೆರವಿನಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ಕೂಡ ನಡೆಯುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಬ್ಲೋಗೆನ್ ವೆಲ್‌ನೆಸ್ ಪ್ರೈ. ಲಿಮಿಟೆಡ್ ಹೆಸರಿನ ಅಸ್ಥಿತ್ವವಿಲ್ಲದ ಕಂಪನಿಯ ಪರವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ತಡೆದು, ಹೈಕೋರ್ಟ್ ಆದೇಶವನ್ನೇ ತಿರುಚಿ ವರದಿ ಸಲ್ಲಿಸಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಕಂಪನಿಯವರು ಕಬ್ಬಿಣದ ಗೇಟ್ ಅಳವಡಿಸಿ ಗ್ರಾಮಸ್ಥರ ಸಂಚಾರವನ್ನೇ ನಿರ್ಬಂಧಿಸಿದ್ದು, ಶಾಲೆ-ಕಾಲೇಜು, ಆಸ್ಪತ್ರೆ ಹಾಗೂ ದಿನನಿತ್ಯ ಜೀವನಕ್ಕೂ ತೊಂದರೆಯಾಗಿದೆ ಎಂದೂ ಮನವಿಯಲ್ಲಿ ದೂರಲಾಗಿದೆ.

ಹೈಕೋರ್ಟ್ ತೀರ್ಪಿನಂತೆ ಗೇಟ್ ತೆರವುಗೊಳಿಸಿ ಸಂಚಾರ ದಾರಿಯನ್ನು ಮುಕ್ತಗೊಳಿಸುವುದರ ಜೊತೆಗೆ, ಬ್ಲೋಗೆನ್ ವೆಲ್‌ನೆಸ್ ಪ್ರೈ. ಲಿಮಿಟೆಡ್ ಗೆ ನೀಡಲಾದ 0.9896 ಹೆಕ್ಟೇರ್ ಅರಣ್ಯ ಜಾಗದ ಲೀಸ್ ಪ್ರಕ್ರಿಯೆಯನ್ನು ತನಿಖೆಗೆ ಒಳಪಡಿಸಿ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಜೊತೆಗೆ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪುನಃ ಆರಂಭಿಸಲು ಅವಕಾಶ ಕಲ್ಪಿಸಬೇಕು ಹಾಗೂ ಗ್ರಾಮಸ್ಥರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಡಾ. ನಾಗೇಶ ನಾಯ್ಕ ಕಾಗಾಲ, ತಾಲೂಕಾಧ್ಯಕ್ಷ ಇಂ. ಪ್ರೀತಮ್ ಮಾಸೂರಕರ್, ವಿ ಎನ್ ನಾಯ್ಕ ಇದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.